ಉದಯವಾಹಿನಿ,ನವದೆಹಲಿ:  ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ನಡುವೆ ರಾಜಕೀಯ ಕಿತ್ತಾಟವೊಂದು ಆರಂಭವಾಗಿದೆ. ಮಾಜಿ ಕಾಮನ್​ವೆಲ್ತ್​ ಗೇಮ್​ ಚಿನ್ನದ ಪದಕ ವಿಜೇತೆ, ಬಿಜೆಪಿ ಪಕ್ಷದ ಕಾರ್ಯಕರ್ತೆ ಬಬಿತಾ ಫೋಗಟ್ ಅವರು, ಸಾಕ್ಷಿ ಮಲಿಕ್ ವಿರುದ್ಧ ಕಿಡಿಕಾರಿದ್ದು, ಸಾಕ್ಷಿ ಕಾಂಗ್ರೆಸ್ ಪಕ್ಷದ ಕೈಗೊಂಬೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ನನ್ನ ಸಹೋದರಿ ಸಾಕ್ಷಿ ಮತ್ತು ಅವಳ ಗಂಡನ ವಿಡಿಯೋ ನೋಡುವಾಗ ನನಗೆ ತುಂಬಾ ಬೇಸರವಾಯಿತು. ಜತೆಗೆ ನಗು ಕೂಡಾ ಬಂತು. ಈ ವಿಡಿಯೊದಲ್ಲಿ ಸಾಕ್ಷಿ ಮಲಿಕ್ ತೋರಿಸಿದ ಅನುಮತಿ ಪತ್ರದಲ್ಲಿ ನನ್ನ ಸಹಿ ಇಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ.

ಗೌರವಾನ್ವಿತ ಪ್ರಧಾನಿ ಮೋದಿ ಮತ್ತು ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ನಂಬಿಕೆ ಇದೆ. ಖಂಡಿತವಾಗಿಯೂ ಸತ್ಯ ಹೊರಬರುತ್ತದೆ. ಒಬ್ಬ ಮಹಿಳಾ ಆಟಗಾರ್ತಿಯಾಗಿ ನಾನು ದೇಶದ ಎಲ್ಲ ಆಟಗಾರ್ತಿಯರ ಜೊತೆಗಿರುತ್ತೇನೆ, ಮುಂದೆಯೂ ಕೂಡ ಇರುತ್ತೇನೆ. ಆದರೆ, ಸಾಕ್ಷಿ ಅವರು ಈ ಪ್ರಕರಣದಲ್ಲಿ ಕಾಂಗ್ರೆಸ್​ನ ಕೈಗೊಂಬೆಯಾಗಿದ್ದಾರೆ ಎಂದು ನನಗೆ ಸ್ಪಷ್ಟವಾಗಿ ತಿಳಿಯುತ್ತಿದೆ ಎಂದು ಹೇಳಿದ್ದಾರೆ. “ನೀವು ಬಾದಾಮಿ ಹಿಟ್ಟಿನಿಂದ ಮಾಡಿದ ರೊಟ್ಟಿಯನ್ನು ತಿನ್ನಬಹುದು, ಆದರೆ ನಾವು ನನ್ನ ದೇಶದ ಜನರು ಗೋಧಿಯಿಂದ ತಯಾರಿಸಿದ ಬ್ರೆಡ್ ಕೂಡ ತಿನ್ನುತ್ತೇವೆ. ನೀವು ಕಾಂಗ್ರೆಸ್ ಕೈಗೊಂಬೆಯಾಗಿದ್ದೀರಿ ಎಂದು ದೇಶದ ಜನರಿಗೆ ಅರ್ಥವಾಗಿದೆ. ನಿಮ್ಮ ನಿಜವಾದ ಉದ್ದೇಶವನ್ನು ಹೇಳಬೇಕಾದ ಸಮಯ ಬಂದಿದೆ” ಎಂದು ಬಬಿತಾ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!