ಉದಯವಾಹಿನಿ, ಅದಂಪುರ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ- ಪಾಕಿಸ್ತಾನ ಕದನ ವಿರಾಮ ಘೋಷಣೆ ಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರನೆ ಬೆಳಗ್ಗೆ ಪಂಜಾಬ್‌ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಅವರ ಈ ಭೇಟಿ ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ ಎಂದೇ ವ್ಯಾಖ್ಯಾನಿ ಸಲಾಗಿದೆ.
ಅಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ ಫೈಟರ್‌ ಪೈಲಟ್‌ಗಳು ಮತ್ತು ತಾಂತ್ರಿಕ ಸಹಾಯಕ ಸಿಬ್ಬಂದಿಯನ್ನು ಪ್ರಧಾನಿ ಮೋದಿ ಭೇಟಿ ಮಾಡಿ ಕಾರ್ಯಾಚಾರಣೆಯ ವಿವರಗಳನ್ನು ಪಡೆದುಕೊಂಡರು. ಸೈನಿಕರು ಸಂತೋಷದಿಂದ ಪ್ರಧಾನಿ ಮೋದಿಯವರನ್ನು ಸುತ್ತುವರೆದು ಮಾತುಕತೆ ನಡೆಸುತ್ತಿರುವ ಫೋಟೋಗಳನ್ನು ಪ್ರಧಾನಮಂತ್ರಿ ಕಚೇರಿ ಹಂಚಿಕೊಂಡಿದೆ.

ಪ್ರಧಾನಮಂತ್ರಿ ಅವರೇ ವಾಯು ಯೋಧರನ್ನು ಭೇಟಿ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಬೆಳಗ್ಗೆ 7 ಗಂಟೆಗೆ ದೆಹಲಿಯ ಪಾಲಂ ಏರ್‌ ಬೇಸ್‌‍ ನಿಂದ ಆದಂಪುರಕ್ಕೆ ಪ್ರಧಾನಿ ಮೋದಿ ತೆರಳಿದರು. ವಾಯುಸೇನೆಯ ಮುಖ್ಯಸ್ಥ ಏರ್‌ ಚೀಫ್‌ ಮಾರ್ಷಲ್‌ ಎ.ಪಿ.ಸಿಂಗ್‌ ಅವರ ಜೊತೆಗಿದ್ದರು. ಭಾರತದ ಆಪರೇಷನ್‌ ಸಿಂಧೂರ್‌ ನಂತರ, ಮೇ 9 ಮತ್ತು 10ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಮ್ಪುರವೂ ಒಂದು. ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಇಂದು ಪಂಜಾಬ್‌ನ ಅದಮ್ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದರು.

Leave a Reply

Your email address will not be published. Required fields are marked *

error: Content is protected !!