ಉದಯವಾಹಿನಿ, ಬೆಂಗಳೂರು : ಆರ್‌ಸಿಬಿ ತಂಡದ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಳಿತದ ದುರಂತದಲ್ಲಿ ಗಾಯಗೊಂಡಿರುವವರಿಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದಲೇ ಭರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಈ ಬಗ್ಗೆ ಟಿಪ್ಪಣಿ ಹೊರಡಿಸಿರುವ ರಾಜ್ಯದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ನಿನ್ನೆ ನಡೆದ ಆರ್‌ಸಿಬಿ ವಿಜಯೋತ್ಸವ ಸಮಾರಂಭದಲ್ಲಿ ಸಂಭವಿಸಿದ
ಕಾಲ್ತುಳಿತದ ದುರಂತದಲ್ಲಿ ೧೧ ಜನ ಮೃತಪಟ್ಟಿದ್ದು ಹಾಗೂ ಸುಮಾರು ಜನ ಗಾಯಗೊಂಡಿದ್ದು ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಆದೇಶದಂತೆ ಗಾಯಾಳುಗಳಿಗೆ ಸೂಕ್ತವಾದ ವೈದ್ಯಕೀಯ ನೆರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಒದಗಿಸಲು ಕ್ರಮ ಕೈಗೊಳ್ಳುವುದು. ಮುಂದುವರೆದು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SಂSಖಿ) ಅಗತ್ಯ ಸಮನ್ವಯ ಕ್ರಮ ತೆಗೆದುಕೊಳ್ಳಲು ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ.
