
ಉದಯವಾಹಿನಿ, ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾದ ಪ್ರಕರಣದಲ್ಲಿ ಕೆಎಸ್‌ಸಿಎಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಏಕಸದಸ್ಯ ಪೀಠವು ಶುಕ್ರವಾರ ಮಧ್ಯಂತರ ಆದೇಶ ಹೊರಡಿಸಿದೆ.
