ಉದಯವಾಹಿನಿ, ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತದ ಘಟನೆಯಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಕಾನೂನನ್ನು ಕಗ್ಗತ್ತಲಿನಲ್ಲಿಟ್ಟಿದ್ದಾರೆ. ಗ್ರೇಟ್ ಸಮಾಜವಾದಿ, ಮಜಾವಾದಿ ಸಿದ್ದರಾಮಯ್ಯನವರಿಂದ ಹೀಗಾಗಿದೆ. ಆರ್‌ಸಿಬಿ ತಂಡ ಐಪಿಎಲ್ ಗೆದ್ದಿದ್ದರೆ, ಕೆಪಿಸಿಸಿ ತಂಡ ಫೋಟೋಗೆ ಫೋಸ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬ್ಯಾಟ್ಸ್‌ಮನ್ ಹಾಗೂ ಡಿ.ಕೆ.ಶಿವಕುಮಾರ್ ಅವರೇ ಬೌಲರ್ ಆಗಿದ್ದಾರೆ. ಸಿದ್ದರಾಮಯ್ಯನವರನ್ನು ಬೋಲ್ಡ್ ಮಾಡಬೇಕೆಂದು ಡಿ.ಕೆ.ಶಿವಕುಮಾರ್ ಪ್ರಯತ್ನ ಮಾಡುತ್ತಿದ್ದರೆ, ಐದು ವರ್ಷ ಸೆಂಚುರಿ ಹೊಡೆಯಬೇಕೆಂದು ಸಿಎಂ ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ. ಇವರಿಬ್ಬರ ನಡುವೆ ರಾಜ್ಯದ ಜನರು ಹಿಟ್ ವಿಕೆಟ್ ಆಗಿದ್ದಾರೆ. 11 ಪ್ರತಿಭಾವಂತ ಯುವಜನರು ಬಲಿಯಾಗಿದ್ದಾರೆ.
