ಉದಯವಾಹಿನಿ, ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು , ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಎಫ್‍ಐಆರ್‌ನಲ್ಲಿ ಕೆಎಸ್‍ಸಿಎ (KSCA), ಆರ್‌ಸಿಬಿ ಮತ್ತು ಡಿಎನ್‌ವೆ ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂ.1, ಉಪ ಮುಖ್ಯಮಂತ್ರಿಗಳು ಆರೋಪಿ ನಂ.2, ಮಾನ್ಯ ಗೃಹ ಸಚಿವ ಪರಮೇಶ್ವರ್ ಅವರು ಆರೋಪಿ ನಂ.3 ಎಂದು ವಾಗ್ದಾಳಿ ನಡೆಸಿದರು. ಕಾಲ್ತುಳಿತ ಹಾಗೂ 11 ಜನ ಅಮಾಯಕರ ಸಾವಿನ ಸಂಬಂಧ ಕೊನೆಗೂ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ ಕೇಸ್ ತೆಗೆದುಕೊಂಡು ರಾಜ್ಯ ಸರಕಾರಕ್ಕೆ ಛೀಮಾರಿ ಹಾಕಿದ ನಂತರ ಸರಕಾರ ಎಚ್ಚತ್ತುಕೊಂಡಿದೆ.
