ಉದಯವಾಹಿನಿ, ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಘಟನೆ ಸರ್ಕಾರದ ಪ್ರಾಯೋಜಿತ ಕೊಲೆ. ಸಿಎಂ, ಡಿಸಿಎಂ, ಗೃಹ ಸಚಿವರೇ ನೇರ ಹೊಣೆ. ಕೂಡಲೇ ಮೂವರೂ ರಾಜೀನಾಮೆ ಕೊಡಬೇಕು ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಆಗ್ರಹಿಸಿದರು.ಘಟನೆ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಘಟನೆಗೆ ರಾಜ್ಯ ಸರ್ಕಾರವೇ ಕಾರಣ. ಸಿಎಂ, ಡಿಸಿಎಂ, ಗೃಹ ಸಚಿವರು ಇದರ ಜವಾಬ್ದಾರಿ ತೆಗೆದುಕೊಳ್ಳಬೇಕು. ಈ ಮೂರೂ ಜನ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.
ನಾನು ಗೃಹ ಸಚಿವ ಇದ್ದಾಗ ಪುನೀತ್ ರಾಜ್‌ಕುಮಾರ್ ನಿಧನರಾಗಿದ್ದಾಗ ನಾವು ಹೇಗೆ ನಿಭಾಯಿಸಿದ್ದೆವು. 20 ಲಕ್ಷ ಜನರನ್ನು ನಾವು ನಿಭಾಯಿಸಿದ್ದೆವು. ಇವರಿಂದ ಚಿನ್ನಸ್ವಾಮಿ ಪ್ರಕರಣ ನಿಭಾಯಿಸಲು ಆಗಿಲ್ಲ. ಪೊಲೀಸರು ಬೇಡ ಅಂದರೂ ಇವರು ಕಾರ್ಯಕ್ರಮ ಮಾಡಿದರು. ನಿಮ್ಮ ಮಕ್ಕಳು, ಮೊಮ್ಮಕ್ಕಳು ಫೋಟೋ ಸೆಷನ್‌ಗೆ ಈ ಕಾರ್ಯಕ್ರಮ ಮಾಡಿದ್ರಾ ಎಂದು ಪ್ರಶ್ನೆ ಮಾಡಿದರು.
