ಉದಯವಾಹಿನಿ, ಬೆಂಗಳೂರು: ಸೋಮವಾರ ರಾಜ್ಯದಲ್ಲಿ ಮುಂಗಾರು Mansoon Rain ಚುರುಕುಗೊಳ್ಳಲಿದ್ದು, ವ್ಯಾಪಕ ಮಳೆಯಾಗುವ ಕುರಿತು ಹವಾಮಾನ ಇಲಾಖೆ IMD ಮುನ್ಸೂಚನೆ ನೀಡಿದೆ. ಜೂ.09ರಿಂದ ಜೂ.13ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 11ರಂದು ಬಳ್ಳಾರಿ, ದಾವಣಗೆರೆ, ವಿಜಯನಗರಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
