
ಉದಯವಾಹಿನಿ, ಕಲಬುರಗಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸರಡಗಿ ಬ್ರಿಡ್ಜ್‌ನಲ್ಲಿ ನಡೆದಿದೆ. ಮಹಾದೇವ್ (20) ನದಿ ಪಾಲಾದ ಯುವಕ. ಕಲಬುರಗಿಯಿಂದ ಐದು ಜನ ಸ್ನೇಹಿತರು ಕೂಡಿಕೊಂಡು ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ವೇಳೆ ಈಜು ಬಾರದೇ ಮಹಾದೇವ್ ನದಿಯಲ್ಲಿ ನಾಪತ್ತೆಯಾಗಿದ್ದಾನೆ.ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳದಿಂದ ಶೋಧಕಾರ್ಯ ಮುಂದುವರಿದಿದೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
