ಉದಯವಾಹಿನಿ, ಬೆಂಗಳೂರು: ರಮೇಶ್ ಬಾಬು ಅವರನ್ನು ವಿಧಾನಪರಿಷತ್ ಸದಸ್ಯ ಸ್ಥಾನ ನಾಮನಿರ್ದೇಶನ ಮಾಡದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಲಾಗಿದೆ. ಸಾಮಾಜಿಕ ಹೋರಾಟಗಾರ ತೇಜಸ್ ಗೌಡ ಅವರು ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗೆ ಸದಸ್ಯ ಸ್ಥಾನ ನೀಡಬಾರದು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ದೂರಿನಲ್ಲಿ ಏನಿದೆ..?: ಭಾರತದ ಸಂವಿಧಾನದ ವಿಧಿ 171(5) ರ ಅಡಿಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವಾಗ ಸಾಹಿತ್ಯ, ವಿಜ್ಞಾನ, ಕಲೆ, ಸಹಕಾರಿ ಚಳುವಳಿ ಅಥವಾ ಸಾಮಾಜಿಕ ಸೇವೆಯಲ್ಲಿ ವಿಶೇಷ ಜ್ಞಾನ ಅಥವಾ ಪ್ರಾಯೋಗಿಕ ಅನುಭವ ಹೊಂದಿರುವ ಸದಸ್ಯರನ್ನು ನಾಮನಿರ್ದೇಶನ ಮಾಡಬೇಕಾಗುತ್ತದೆ.
