ಉದಯವಾಹಿನಿ, ಶಿಲ್ಲಾಂಗ್: ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ್ದ ಇಂದೋರ್ ದಂಪತಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯ ಕೊಲೆಗೆ ಸಂಚು ರೂಪಿಸಿದ ಆರೋಪದಡಿ ಉತ್ತರ ಪ್ರದೇಶದ ಗಾಜಿಪುರದಲ್ಲಿ ಪತ್ನಿಯನ್ನು ಬಂಧಿಸಲಾಗಿದೆ.ರಾಜಾ ರಘುವಂಶಿ (30) ಹತ್ಯೆಗೆ ಸಂಬಂಧಿಸಿದಂತೆ ಪತ್ನಿ ಸೋನಮ್ ರಘುವಂಶಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಸೋನಮ್ ಕೊಲೆಗಾರರನ್ನು ನೇಮಿಸಿಕೊಂಡು ಹನಿಮೂನ್ ಸಮಯದಲ್ಲಿ ತನ್ನ ಪತಿಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಮೇಘಾಲಯ ಡಿಜಿಪಿ ಇದಶಿಶಾ ನೊಂಗ್ರಾಂಗ್ ಹೇಳಿದ್ದಾರೆ. ಮೇ 23ರಂದು ಹನಿಮೂನ್‌ಗೆಂದು ಮೇಘಾಲಯಕ್ಕೆ ಆಗಮಿಸಿದ್ದ ದಂಪತಿ, ಮಳೆಯಲ್ಲಿ ಸಮೃದ್ಧಿಯಾದ ಬೆಟ್ಟದ ಸೌಂದರ್ಯವನ್ನು ಕಣ್ತುಂಬಿಕೊಳ್ಳುವ ಸಲುವಾಗಿ ಚಿರಾಪುಂಜಿಗೆ ಬಂದಿದ್ದರು. ಈ ವೇಳೆ ಇಬ್ಬರೂ ನಾಪತ್ತೆಯಾಗಿದ್ದರು.
