
ಉದಯವಾಹಿನಿ, ಬೆಂಗಳೂರು: ಕಾಲ್ತುಳಿತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ತಲಾ 5 ಕೋಟಿ ಪರಿಹಾರ ಕೊಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಬೆಂಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್, ಆರ್‌ಸಿಬಿ ಫ್ರಾಂಚೈಸಿ ಹಾಗೂ ಕರ್ನಾಟಕ ಸರ್ಕಾರ ಸೇರಿ ಒಬ್ಬೊಬ್ಬ ಸಂತ್ರಸ್ತರ ಕುಟುಂಬಗಳಿಗೆ ತಲಾ ಐದು ಕೋಟಿ ರೂ ಪರಿಹಾರ ಜಾರಿಗೊಳಿಸಬೇಕು. ಜೊತೆಗೆ ಗಾಯಗೊಂಡವರ ಜೀವನದ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
