
ಉದಯವಾಹಿನಿ, ಬೆಂಗಳೂರು: ಸದ್ಯ ರಾಜ್ಯದಲ್ಲಿ ಬೆಂಗಳೂರು ಕಾಲ್ತುಳಿತ ಪ್ರಕರಣ ಕೋಲಾಹಲ ಎಬ್ಬಿಸಿದ್ದು, ವಿಪಕ್ಷಗಳು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿವೆ. ಈ ಹೊತ್ತಿನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಚಿವ ಸಂಪುಟ ಪುನಾರಚನೆಗೆ ಸೂಚನೆ ನೀಡುವ ದಿಸೆಯಲ್ಲಿ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ (ಇಂದು) ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಖುದ್ದು ವರಿಷ್ಠ ರಾಹುಲ್ ಗಾಂಧಿ ಹಾಗೂ ಐಸಿಸಿ ನಾಯಕರು ಚರ್ಚೆ ನಡೆಸಲು ಮುಂದಾಗಿದ್ದಾರೆ.
ಹೌದು. ಹೈಕಮಾಂಡ್ ಬುಲಾವ್ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಯ ಕಾಂಗ್ರೆಸ್ ಕಚೇರಿಗೆ ತೆರಳಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವರಿಷ್ಠರು ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಲಿದ್ದಾರೆ.
