
ಉದಯವಾಹಿನಿ, ಆನೇಕಲ್: ಆಟವಾಡ್ತಿದ್ದಾಗ ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ. ನಾರಾಯಣಘಟ್ಟ ಗ್ರಾಮದ ತನಿಷ್ಕಾ(11) ಮೃತ ಬಾಲಕಿ. ಶಾಲೆಗೆ ರಜೆ ಇದ್ದ ಕಾರಣ ತನಿಷ್ಕಾ ಮನೆ ಬಳಿಯೇ ಆಟವಾಡುತ್ತಿದ್ದಳು. ವಿದ್ಯುತ್ ಕಂಬದ ಬಳಿ ಆಟವಾಡುತ್ತಿದ್ದಾಗ ಕರೆಂಟ್ ಶಾಕ್ ತಗುಲಿದೆ. ವಿದ್ಯುತ್ ಶಾಕ್‌ನಿಂದ ಗಾಯಗೊಂಡಿದ್ದ ತನಿಷ್ಕಾಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
