ಉದಯವಾಹಿನಿ, ಮಂಡ್ಯ: ಕೆಆರ್‌ಎಸ್‌ನಲ್ಲಿನ ಕಾವೇರಿ ಆರತಿ ಹಾಗೂ ಮಂಡ್ಯ ಜಿಲ್ಲೆಯ ಯುವಜನರಿಗೆ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಅಮ್ಯೂಸ್ಮೆಂಟ್ ಪಾರ್ಕ್ ಮಾಡಿಯೇ ಮಾಡುತ್ತೇವೆ ಎಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ.
ಸದ್ಯ ಕೆಆರ್‌ಎಸ್ ಡ್ಯಾಂ ಬಳಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ಮಾಡಲು ರೈತ ಸಂಘಟನೆಗಳು ವ್ಯಾಪಕವಾಗಿ ವಿರೋಧ ವ್ಯಕ್ತಪಡಿಸುತ್ತಿವೆ. ಈ ಸಂಭಂಧ ಹೋರಾಟಗಳನ್ನೂ ರೂಪಿಸುತ್ತಿವೆ. ಈ ವಿಚಾರವಾಗಿ ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ, ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ಆದ್ರೆ ಜಿಲ್ಲೆಯ ಯುವಕರಿಗೆ ಉದ್ಯೋಗ ಸೃಷ್ಟಿಯಾಗುವುದರ ಜೊತೆಗೆ ದೇಶ-ವಿದೇಶದಿಂದ ಪ್ರವಾಸಿಗರು ಬರ್ತಾರೆ. ಅದರ ಅನುಕೂಲ ರೈತರು ಹಾಗೂ ರೈತರ ಮಕ್ಕಳಿಗೆ ಆಗುತ್ತೆ ಎಂದು ತಿಳಿಸಿದ್ದಾರೆ.
