ಉದಯವಾಹಿನಿ, ಕೊಪ್ಪಳ: ಅಕ್ರಮ ಗಣಿಗಾರಿಕೆ ಹಗರಣ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿಯವರಿಗೆ ಜಾಮೀನು ಸಿಕ್ಕ ಬೆನ್ನಲ್ಲೇ ಗಂಗಾವತಿ ಜನರಲ್ಲಿ ಸಂಭ್ರಮ ಮನೆಮಾಡಿದೆ. ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆ ರೆಡ್ಡಿ ಬೆಂಬಲಿಗರು ಗಂಗಾವತಿ ನಗರದಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿ ಸಿಡಿಸಿ, ಸಿಹಿ ಹಂಚಿ, ಬಣ್ಣ ಎರಚುವ ಮೂಲಕ ಸಂಭ್ರಮಿಸಿದ್ದಾರೆ. ಎತ್ತುಗಳನ್ನು ಹಿಡಿದುಕೊಂಡು ಬಣ್ಣ ಎರಚುವುದಲ್ಲದೇ ಜನಾರ್ದನ ರೆಡ್ಡಿ ಫೋಟೋ ಹಿಡಿದು ಘೋಷಣೆ ಕೂಗಿದ್ದಾರೆ.

ಏನಿದು ಪ್ರಕರಣ…?: ಆಂಧ್ರ-ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡ ಹೀರೆಹಾಳ್-ಸಿದ್ದಾಪುರ ಬಳಿಯ ಓಬಳಾಪುರಂ ಬೆಟ್ಟದಲ್ಲಿ ನಡೆದಿದ್ದ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಓಎಂಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸರೆಡ್ಡಿ ಮತ್ತು ಜನಾರ್ದನರೆಡ್ಡಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಗಣಿಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ ಹಾಗೂ ಗಣಿ ಇಲಾಖೆಯಿಂದಲೂ ಅಕ್ರಮ ನಡೆದಿತ್ತು. ರಾಜ್ಯದ 29 ಲಕ್ಷ ಟನ್ ಅದಿರನ್ನು ಲೂಟಿ ಮಾಡಿ 884 ಕೋಟಿ ರೂ. ಆದಾಯ ಪಡೆದಿದ್ದಾರೆ ಎನ್ನುವ ಆರೋಪವಿದೆ. ಈ ಪ್ರಕರಣದಲ್ಲಿ ಶ್ರೀನಿವಾಸರೆಡ್ಡಿ, ಜನಾರ್ದನ ರೆಡ್ಡಿ, ಆಪ್ತ ಅಲಿಖಾನ್, ಗಣಿ ಇಲಾಖೆಯ ನಿರ್ದೇಶಕ ರಾಜಗೋಪಾಲ್, ಆಂಧ್ರದ ಮಾಜಿ ಸಚಿವೆ ಸಬಿತಾ ಇಂದ್ರಾರೆಡ್ಡಿ, ನಿವೃತ್ತ ಐಎಎಸ್ ಅಧಿಕಾರಿ ಕೃಪಾನಂದ, ಶ್ರೀಲಕ್ಷ್ಮೀ ಇದ್ದಾರೆ.

Leave a Reply

Your email address will not be published. Required fields are marked *

error: Content is protected !!