ಉದಯವಾಹಿನಿ, ವಿಯೆನ್ನಾ: ಶಾಲೆಯ ಒಳಗಡೆ ನಡೆದ ಗುಂಡಿನ ದಾಳಿಯಲ್ಲಿ 10 ಮಂದಿ ಮೃತಪಟ್ಟ ಘಟನೆ ಆಸ್ಟ್ರೀಯಾದ ಗ್ರಾಜ್‌ ನಗರದಲ್ಲಿ ನಡೆದಿದೆ. ಆಸ್ಟ್ರೀಯಾ ಕಾಲಮಾನ ಮಂಗಳವಾರ ಬೆಳಗ್ಗೆ 10 ಗಂಟೆಗೆ ಈ ಘಟನೆ ನಡೆದಿದೆ. ಗುಂಡಿನ ದಾಳಿ ನಡೆಸಿದ ಬಳಿಕ ದಾಳಿಕೋರ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ದುರಂತದಲ್ಲಿ 8 ವಿದ್ಯಾರ್ಥಿಗಳು ಮತ್ತು ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಒಬ್ಬನೇ ಈ ಕೃತ್ಯವನ್ನು ಎಸಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಸುಮಾರು 3 ಲಕ್ಷ ಜನರು ನೆಲೆಸಿರುವ ಗ್ರಾಜ್ ನಗರವು ರಾಜಧಾನಿ ವಿಯೆನ್ನಾದಿಂದ ಸುಮಾರು 200 ಕಿಲೋಮೀಟರ್ ದೂರದಲ್ಲಿದೆ. ಇದು ಆಸ್ಟ್ರಿಯಾದ ಎರಡನೇ ಅತಿದೊಡ್ಡ ನಗರವಾಗಿದೆ.

Leave a Reply

Your email address will not be published. Required fields are marked *

error: Content is protected !!