ಉದಯವಾಹಿನಿ, ಬೆಂಗಳೂರು: ಚಿನ್ನಸ್ವಾಮಿಯಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್ ಜಾರಿ ಮಾಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಾಕಷ್ಟು ಜನ ಮಕ್ಕಳು ತೊಂದರೆಗೆ ಒಳಗಾಗಿರುವ ಬಗ್ಗೆ ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ನೋಟಿಸ್ ನೀಡಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ವಿಜಯೋತ್ಸವದ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿದ್ದರು. ಅವಘಡದಲ್ಲಿ ಸಾಕಷ್ಟು ಜನ ಮಕ್ಕಳಿಗೆ ತೊಂದರೆಯಾಗಿರುವ ಮಾಹಿತಿ ಇದೆ. ಆದರೆ ನಿಖರವಾಗಿ ಎಷ್ಟು ಮಕ್ಕಳಿಗೆ ಸಮಸ್ಯೆಯಾಗಿದೆ ಏನಾಗಿದೆ ಎಂಬುದರ ವಿವರ ಸಿಕ್ಕಿಲ್ಲ. ಹೀಗಾಗಿ ಮಕ್ಕಳ ಹಕ್ಕು ಆಯೋಗವು ಸಿಐಡಿಗೆ ವಿವರ ಕೋರಿ ನೋಟಿಸ್ ಜಾರಿ ಮಾಡಿದೆ. ಜೂ. 4ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದರು. ಈ ವೇಳೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
