ಉದಯವಾಹಿನಿ, ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತ ಹಿನ್ನೆಲೆ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜೂನ್ 15ರವರೆಗೆ ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಭಾಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..?: ಉತ್ತರ ಕನ್ನಡ ಜಿಲ್ಲೆ ಹೊರತು ಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
