
ಉದಯವಾಹಿನಿ, ಪಾಟ್ನಾ: ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ವೇಗವಾಗಿ ಬಂದ ಸ್ಕಾರ್ಪಿಯೋ ಕಾರು ಪೊಲೀಸರಿಗೆ ಡಿಕ್ಕಿಯೊಡೆದ ಪರಿಣಾಮ ಓರ್ವ ಮಹಿಳಾ ಕಾನ್ಸ್‌ಟೆಬಲ್ ಸಾವನ್ನಪ್ಪಿದ್ದು, ಇಬ್ಬರು ಅಧಿಕಾರಿಗಳು ಗಾಯಗೊಂಡಿರುವ ಘಟನೆ ಪಾಟ್ನಾದ ಅಟಲ್ ಪಥ್‌ನಲ್ಲಿ ನಡೆದಿದೆ. ಬುಧವಾರ ತಡರಾತ್ರಿ ಪಾಟ್ನಾದ ಶ್ರೀಕೃಷ್ಣ ಪುರಿ ಪ್ರದೇಶದ ಅಟಲ್ ಪಥ್‌ನಲ್ಲಿ ಗಸ್ತಿನಲ್ಲಿದ್ದ ಪೊಲೀಸರ ತಂಡ ವಾಹನ ತಪಾಸಣೆ ನಡೆಸುತ್ತಿತ್ತು. ಶ್ರೀಕೃಷ್ಣ ಪುರಿ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್, ಸಹಾಯಕ ಸಬ್-ಇನ್ಸ್‌ಪೆಕ್ಟರ್ ಮತ್ತು ಮಹಿಳಾ ಕಾನ್‌ಸ್ಟೆಬಲ್ ಸ್ಥಳದಲ್ಲಿದ್ದರು. ಕಾರು ತಪಾಸಣೆ ನಡೆಸುವ ವೇಳೆ ವೇಗವಾಗಿ ಬಂದ ಮತ್ತೊಂದು ಕಾರು ತಪಾಸಣೆ ನಡೆಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಡಿದೆ. ಪರಿಣಾಮ ಕಾನ್ಸ್‌ಟೆಬಲ್ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ.
