ಉದಯವಾಹಿನಿ, ವಾಷಿಂಗ್ಟನ್‌: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನ ಅದ್ಭುತ ಪಾಲುದಾರ ಎಂದು ಸೆಂಟ್ರಲ್ ಕಮಾಂಡ್ ಕಮಾಂಡರ್ ಜನರಲ್ ಮೈಕೆಲ್ ಕುರಿಲ್ಲಾ ಬಣ್ಣಿಸಿದ್ದಾರೆ. ಪಾಕಿಸ್ತಾನ ಸೇನಾ ಮುಖ್ಯಸ್ಥ ಫೀಲ್ಡ್‌ ಮಾರ್ಷಲ್‌ ಅಸೀಮ್‌ ಮುನೀರ್‌ ಅವರನ್ನು ಆಹ್ವಾನಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮುಂದಾಗಿದ್ದಾರೆ. ಈ ನಡುವೆ ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್-ಖೋರಾಸನ್) ಉಗ್ರರನ್ನು ಸದೆಬಡಿಯುವಲ್ಲಿ ಪಾಕಿಸ್ತಾನ ನೀಡಿದ ಸಹಕಾರವನ್ನು ಅಮೆರಿಕ ಮಿಲಿಟರಿ ಕಮಾಂಡರ್‌ ಹಾರಿ ಹೊಗಳಿದ್ದಾರೆ.

ಅಮೆರಿಕದ ಸಂಸತ್ತಿನಲ್ಲಿ ಸಶಸ್ತ್ರ ಸೇವೆಗಳ ಸಮಿತಿ ವಿಚಾರಣೆ ಸಂದರ್ಭದಲ್ಲಿ ಕುರಿಲ್ಲಾ ಮಾತನಾಡಿದ್ದು, ಇಸ್ಲಾಮಾಬಾದ್‌ ಪಾತ್ರವನ್ನು ಹಾಡಿಹೊಗಳಿದ್ದಾರೆ. ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಭಯೋತ್ಪಾದನೆ ಪ್ರಾಯೋಜಿತ ಪಾಕ್‌ ಮುಖವಾಡವನ್ನು ಬಯಲುಮಾಡಲು ಭಾರತ ಸರ್ವಪಕ್ಷ ನಿಯೋಗವನ್ನು ವಿದೇಶಗಳಿಗೆ ಕಳುಹಿಸಿದೆ. ಈ ಹೊತ್ತಿನಲ್ಲೇ ಪಾಕಿಸ್ತಾನವನ್ನು ಅಮೆರಿಕ ಮಿಲಿಟರಿ ಅಧಿಕಾರಿ ಹಾಡಿಹೊಗಳಿದ್ದಾರೆ. ಅಲ್ಲದೇ ನಾವು ಪಾಕಿಸ್ತಾನ ಮತ್ತು ಭಾರತ ಎರಡೂ ದೇಶಗಳೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವುದಾಗಿಯೂ ಪ್ರತಿಪಾದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!