ಉದಯವಾಹಿನಿ, ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 2 ವರ್ಷಗಳಲ್ಲಿ ಬೃಹತ್ ಕೈಗಾರಿಕೆ ಇಲಾಖೆಯಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಆಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (M B Patil) ತಿಳಿಸಿದರು. ವಿಧಾನಸೌಧದಲ್ಲಿ ಇಲಾಖೆಯ 2 ವರ್ಷಗಳ ಸಾಧನೆ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು. ಈ ವೇಳೆ, 2 ವರ್ಷಗಳಲ್ಲಿ ರಾಜ್ಯದಲ್ಲಿ 6,57,660 ಕೋಟಿ ರೂ. ಹೂಡಿಕೆ ಆಗಿದೆ. 115 ಒಡಂಬಡಿಕೆಗಳು ಆಗಿದೆ. ಇದರಿಂದ 2,32,771 ಉದ್ಯೋಗ ಸೃಷ್ಟಿ ಆಗಲಿದೆ. ಏಕಗವಾಕ್ಷಿ ಅನುಮೋದನೆ ಸಮಿತಿಯೂ 906 ಯೋಜನೆಗೆ ಒಪ್ಪಿಗೆ ನೀಡಿದೆ. ಇದರಿಂದ 1,13,200 ಕೋಟಿ ರೂ. ಹೂಡಿಕೆ ನಿರೀಕ್ಷೆ ಇದೆ. 2,23,982 ಉದ್ಯೋಗ ಸೃಷ್ಟಿ ಆಗಲಿದೆ ಎಂದು ಮಾಹಿತಿ ನೀಡಿದರು.

ಫೆಬ್ರವರಿಯಲ್ಲಿ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಮಾಡಿದ್ದೆವು. 3,250 ಉದ್ಯಮಿಗಳು ಭಾಗಿಯಾಗಿದ್ರು. 1,200 ಕಂಪನಿಗಳು ಹೂಡಿಕೆ ಆಸಕ್ತಿ ತೋರಿಸಿವೆ. 6,23,845 ಕೋಟಿ ಹೂಡಿಕೆ ಒಪ್ಪಿಗೆ ಆಗಿದೆ. 4,03,533 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಹೊಸ ಕೈಗಾರಿಕಾ ನೀತಿ 2025-30 ಘೋಷಣೆ ಮಾಡಲಾಗಿದೆ. ಹೊಸ ಕೈಗಾರಿಕೆ ನೀತಿ ಕೈಗಾರಿಕಾ ಅಭಿವೃದ್ಧಿಗೆ ಪೂರಕವಾಗಿದೆ. 5 ವರ್ಷಗಳಲ್ಲಿ 7.50 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಆಕರ್ಷಣೆ ಮಾಡುವುದು ಮತ್ತು 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದರು.

 

Leave a Reply

Your email address will not be published. Required fields are marked *

error: Content is protected !!