ಉದಯವಾಹಿನಿ, ಲಂಡನ್: ಬೆಕೆನ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಇಂಟ್ರಾ-ಸ್ಕ್ವಾಡ್ ಪಂದ್ಯದಲ್ಲಿ ಭಾಗಿಯಾಗಿರುವ ಟೀಂ ಇಂಡಿಯಾ ಆಟಗಾರರು ಪಂದ್ಯದ ಆರಂಭಕ್ಕೂ ಮುನ್ನ ಕಪ್ಪು ಪಟ್ಟಿ ಧರಿಸಿ ಮೌನಾಚರಣೆ ಮಾಡಿ, ಅಹಮದಾಬಾದ್ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು.
ಆಗ್ನೇಯ ಲಂಡನ್‌ನ ಬೆಕೆನ್‌ಹ್ಯಾಮ್‌ನಲ್ಲಿ ಇಂಟ್ರಾ-ಸ್ಕ್ವಾಡ್ ಪಂದ್ಯ ನಡೆಯುತ್ತಿದ್ದು, ಟೀಂ ಇಂಡಿಯಾ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಭಾಗಿಯಾಗಿದ್ದಾರೆ. ಅಹಮದಾಬಾದ್ ವಿಮಾನ ದುರಂತದ ಹಿನ್ನೆಲೆ ಪಂದ್ಯದ ಆರಂಭಕ್ಕೂ ಮುನ್ನ ತೋಳಿಗೆ ಕಪ್ಪು ಪಟ್ಟಿ ಧರಿಸಿ ಒಂದು ನಿಮಿಷ ಮೌನಾಚರಣೆ ಮಾಡಿದರು. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು.

ಲಾರ್ಡ್ಸ್‌ನಲ್ಲಿ ಮೌನಾಚರಣೆ: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಲಂಡನ್‌ನ ಲಾರ್ಡ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಇಂದು ಮೂರನೇ ದಿನದ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ಆಟಗಾರರು ಮೌನಾಚರಣೆ ಮಾಡಿದರು.

Leave a Reply

Your email address will not be published. Required fields are marked *

error: Content is protected !!