ಉದಯವಾಹಿನಿ, ಟೆಹ್ರಾನ್ : ಇರಾನ್‌ನ ಪರಮಾಣು ಶಸ್ತ್ರಾಸ್ತ್ರ ಕೇಂದ್ರ, ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್‌ನ ಡಜನ್‌ಗಟ್ಟಲೆ ಜೆಟ್‌ಗಳು ಭೀಕರ ದಾಳಿ ನಡೆಸಿವೆ. ಈ ದಾಳಿಯಲ್ಲಿ ಇರಾನ್‌ನ ಪ್ಯಾರಾಮಿಲಿಟರಿ ರೆವಲ್ಯೂಷನರಿ ಗಾರ್ಡ್ ಮುಖ್ಯಸ್ಥ ಜನರಲ್ ಹೊಸೈನ್ ಸಲಾಮಿ ಹತ್ಯೆಗೀಡಾಗಿದ್ದಾರೆ. ಇದರಿಂದಾಗಿ ಇಸ್ರೇಲ್ ಹಾಗೂ ಇರಾನ್ ನಡುವಣ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಿದೆ.
ಆಪರೇಷನ್ ರೈಸಿಂಗ್ ಲಯನ್ ಕಾರ್ಯಾಚರಣೆಯಲ್ಲಿ ಇರಾನ್‌ನ ಅಣ್ವಸ್ತ್ರ ಹಾಗೂ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಟೆಹ್ರಾನ್ ಮೇಲಿನ ದಾಳಿಯನ್ನು ಇರಾನ್ ಖಚಿತಪಡಿಸಿದೆ. ದಾಳಿಯಲ್ಲಿ ಇರಾನ್‌ನ ಕ್ಷಿಪಣಿ ಕಾರ್ಖಾನೆಗಳು, ಯುರೇನಿಯಂ ಸಂಗ್ರಹಣಾ ಕೇಂದ್ರಕ್ಕೂ ಹಾನಿಯಾಗಿರುವುದು ತಿಳಿದುಬಂದಿದೆ.
ಇಸ್ರೇಲ್ ಕೂಡ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿಪಡಿಸುವುದನ್ನು ತಡೆಲು ಶುಕ್ರವಾರ ಇರಾನಿನ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಹೇಳಿಕೊಂಡಿದೆ. ಅಲ್ಲದೇ ಇರಾನ್ 15 ಪರಮಾಣು ಬಾಂಬ್‌ಗಳನ್ನು ತಯಾರಿಸಲು ಸಾಕಷ್ಟು ಸಾಮಗ್ರಿಗಳನ್ನ ಸಂಗ್ರಹ ಮಾಡಿಕೊಂಡಿತ್ತು. ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸಿದೆ ಎಂದು ಇಸ್ರೇಲಿ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
