ಉದಯವಾಹಿನಿ, ಲಂಡನ್‌: ಕೊನೆಗೂ ದಕ್ಷಿಣ ಆಫ್ರಿಕಾ ತಂಡ ಚೋಕರ್ಸ್‌ ಹಣೆಪಟ್ಟಿ ಕಳಚಿದ್ದು ಐಸಿಸಿ ಟ್ರೋಫಿ ಗೆಲ್ಲಬೇಕೆಂಬ ದಶಕಗಳ ಕನಸು ನನಸು ಮಾಡಿಕೊಂಡಿದೆ. ಇಲ್ಲಿನ ಐತಿಹಾಸಿಕ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆದ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಆಸೀಸ್‌ ವಿರುದ್ಧ 5 ವಿಕೆಟ್‌ಗಳ‌ ಅಮೋಘ ಜಯ ಸಾಧಿಸಿ ವಿಶ್ವ ಟೆಸ್ಟ್‌ ಚಾಂಪಿಯನ್ಸ್‌ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.
2019ರಲ್ಲಿ ವಿಶ್ವ ಟೆಸ್ಟ್‌ ಚಾಂಪಿಯನ್ಸ್‌ ಶಿಪ್‌ ಆರಂಭಿಸಲಾಯಿತು. ಚೊಚ್ಚಲ ಆವೃತ್ತಿಯಲ್ಲೇ ನ್ಯೂಜಿಲೆಂಡ್‌ ಚಾಂಪಿಯನ್‌ ಆದ್ರೆ 2021-25ರ 2ನೇ ಆವೃತ್ತಿಯಲ್ಲಿ ಆಸ್ಟ್ರೇಲಿಯಾ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಈ ಎರಡೂ ಆವೃತ್ತಿಗಳಲ್ಲೂ ಟೀಂ ಇಂಡಿಯಾ ರನ್ನರ್‌ ಅಪ್‌ ಪ್ರಶಸ್ತಿಗೆ ಪಾತ್ರವಾಗಿತ್ತು. ಇದೀಗ ಮೂರನೇ ಆವೃತ್ತಿಯಲ್ಲಿ ದಕ್ಷಿಣ ಆಫ್ರಿಕಾ ಚಾಂಪಿಯನ್‌ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.

ಗೆಲುವಿಗೆ 282 ರನ್‌ಗಳ ಗುರಿ ಪಡೆದಿದ್ದ ಆಫ್ರಿಕಾ ಮೂರನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್‌ ನಷ್ಟಕ್ಕೆ 213 ರನ್‌ ಗಳಿಸಿ ಸುಭದ್ರ ಸ್ಥಿತಿಯಲ್ಲಿತ್ತು. ಗೆಲುವಿಗೆ ಇನ್ನೂ 69 ರನ್‌ಗಳಷ್ಟೇ ಬೇಕಿತ್ತು. ಈ ನಡುವೆ ಮಿಚೆಲ್‌ ಸ್ಟಾರ್ಕ್‌, ಪ್ಯಾಟ್‌ ಕಮ್ಮಿನ್ಸ್‌ ಅವರ ಮ್ಯಾಜಿಕ್‌ನಿಂದ ವಿಕೆಟ್‌ ಪಡೆದ ಹೊರತಾಗಿಯೂ ಏಡನ್‌ ಮಾರ್ಕ್ರಂ ಅವರ ಏಕಾಂಗಿ ಹೋರಾಟ ಫಲ ಕೊಟ್ಟಿತು. ಅಂತಿಮವಾಗಿ ದಕ್ಷಿಣ ಆಫ್ರಿಕಾ 5 ವಿಕೆಟ್‌ಗಳ ಗೆಲುವು ಸಾಧಿಸಿ ಟ್ರೋಫಿಗೆ ಮುತ್ತಿಟ್ಟಿತು.

Leave a Reply

Your email address will not be published. Required fields are marked *

error: Content is protected !!