ಉದಯಯವಾಹಿನಿ, ಹಾಸನ: ವಿದ್ಯುತ್ ಶಾಕ್‍ನಿಂದ ಎರಡು ಕಾಡಾನೆಗಳು ಸಾವನ್ನಪ್ಪಿದ ಘಟನೆ ಸಕಲೇಶಪುರ ತಾಲೂಕಿನ ಗುಡ್ಡೆಬೆಟ್ಟ ಗ್ರಾಮದ ಬಳಿಯ ಎಬಿಸಿ ಎಸ್ಟೇಟ್‍ನಲ್ಲಿ ನಡೆದಿದೆ.ಆಹಾರ ಅರಸಿ, ಮರಿಯೊಂದಿಗೆ ಕಾಡಾನೆ ಕಾಫಿ ತೋಟಕ್ಕೆ ಬಂದಿತ್ತು. ಈ ವೇಳೆ, ಕಾಫಿ ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್‌ ತಂತಿ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದು, ತಂತಿಯನ್ನು ತುಳಿದು ಸಾವನ್ನಪ್ಪಿವೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

Leave a Reply

Your email address will not be published. Required fields are marked *

error: Content is protected !!