ಉದಯಯವಾಹಿನಿ, ವಾಷಿಂಗ್ಟನ್ : ಇಸ್ರೇಲ್ ನಡೆಸಿದ ವಾಯುದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಒಂದು ವೇಳೆ ಇರಾನ್ ಅಮೆರಿಕದ ಮೇಲೆ ದಾಳಿ ಮಾಡಿದ್ರೆ, ಹಿಂದೆಂದೂ ನೋಡಿರದ ಮಟ್ಟದಲ್ಲಿ ನಮ್ಮ ಮಿಲಿಟರಿ ಬಲವನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಇಸ್ರೇಲ್ ನೆರವಿಗೆ ಬಂದರೆ ನಿಮ್ಮ ನೌಕಾನೆಲೆಗಳನ್ನು ಧ್ವಂಸಗೊಳಿಸ್ತೇವೆ ಎಂದು ಇರಾನ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಟ್ರಂಪ್ ವಾರ್ನಿಂಗ್ ಕೊಟ್ಟಿದ್ದಾರೆ. ಇರಾನ್‌ನ ಅಣ್ವಸ್ತ್ರ ಮತ್ತು ಮಿಲಿಟರಿ ನೆಲೆಗಳ ಮೇಲಿನ ಇಸ್ರೇಲ್ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಇರಾನ್ ನಮ್ಮ ಮೇಲೆ ಯಾವುದೇ ರೀತಿಯಲ್ಲಿ ದಾಳಿ ಮಾಡಿದ್ರೆ ಅಮೆರಿಕದ ಪಡೆಗಳ ಸಂಪೂರ್ಣ ಶಕ್ತಿ ಅಲ್ಲಿ ಬಂದಿಳಿಯಲಿದೆ. ಇಂದೆಂದೂ ನೋಡಿರದ ಮಟ್ಟದಲ್ಲಿ ಸೇನಾ ಬಲವನ್ನು ಎದುರಿಸಬೇಕಾಗುತ್ತದೆ ಎಂದು ಭೀಕರ ದಾಳಿಯ ಮುನ್ಸೂಚನೆ ನೀಡಿದ್ದಾರೆ. ಒಂದು ಕಾಲದಲ್ಲಿ ಇರಾನ್ ಸಾಮ್ರಾಜ್ಯ ಎಂದು ಕರೆಯಲ್ಪಡುತ್ತಿತ್ತು, ಈಗ ಅವರಲ್ಲಿ ಏನೂ ಉಳಿದಿಲ್ಲ. ಇರಾನ್‌ನ ಪರಿಸ್ಥಿತಿ ಕುರಿತಂತೆ ರಾಷ್ಟ್ರೀಯ ಭದ್ರತಾ ತಂಡದ ಜೊತೆ ಮಾತುಕತೆ ನಡೆಸಿದ್ದೇನೆ. ದಾಳಿಯಲ್ಲಿ ನಮ್ಮ ದೇಶದ ಯಾವುದೇ ಪಾತ್ರವಿಲ್ಲ. ಆದರೆ, ಇರಾನ್ ಮೇಲಿನ ದಾಳಿಗೆ ಅಮೆರಿಕದ ಶಸ್ತ್ರಾಸ್ತ್ರಗಳನ್ನು ಇಸ್ರೇಲ್ ಬಳಸಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
