ಉದಯವಾಹಿನಿ, ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರ ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ `45′ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರಸ್ತುತ `45′ ಚಿತ್ರಕ್ಕಾಗಿ ಅದ್ದೂರಿ ಪ್ರಮೋಷನ್ ಸಾಂಗ್‌ನ ಚಿತ್ರೀಕರಣ ನಡೆಸಲು ಚಿತ್ರತಂಡ ತಯಾರಿ ನಡೆಸಿದೆ. ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರೊಂದಿಗೆ ಈ ಹಾಡಿಗೆ ಹೆಜ್ಜೆ ಹಾಕಲು ಉಗಾಂಡದಿಂದ `ಜಿಟೊ ಕಿಡ್ಸ್’ ಎಂದೇ ಖ್ಯಾತರಾಗಿರುವ ನೃತ್ಯಗಾರರ ತಂಡ ಆಗಮಿಸಿದೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ನಿರ್ದೇಶಕ ಅರ್ಜುನ್ ಜನ್ಯ ಅವರು ದೂರದ ಉಗಾಂಡಾದಿಂದ ಆಗಮಿಸಿದ ನೃತ್ಯಗಾರರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
