ಉದಯವಾಹಿನಿ, ನವದೆಹಲಿ: ಇಸ್ರೇಲ್, ಇರಾನ್ ಮೇಲೆ ಪರಮಾಣು ಬಾಂಬ್ ಬಳಸಿದರೆ, ಪಾಕಿಸ್ತಾನ ಕೂಡ ಇಸ್ರೇಲ್ ಮೇಲೆ ಪರಮಾಣು ಬಾಂಬ್ ದಾಳಿ ಮಾಡುತ್ತದೆ ಎಂದು ನಮಗೆ ತಿಳಿಸಿದೆ ಎಂದು ಐಆರ್‌ಜಿಸಿ ಕಮಾಂಡರ್ ಮತ್ತು ಇರಾನ್‌ನ ರಾಷ್ಟ್ರೀಯ ಭದ್ರತಾ ಮಂಡಳಿಯ ಸದಸ್ಯ ಜನರಲ್ ಮೊಹ್ಸೆನ್ ರೆಜೈ ನೀಡಿದ ಹೇಳಿಕೆಯನ್ನು ಪಾಕಿಸ್ತಾನ ನಿರಾಕರಿಸಿದೆ.
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಮೊಹ್ಸೆನ್ ರೆಜೈ ದೂರದರ್ಶನ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದರು. ಆದರೆ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಈ ಹೇಳಿಕೆಯನ್ನು ತಳ್ಳಿಹಾಕಿ, ಪಾಕ್ ಅಂತಹ ಯಾವುದೇ ಭರವಸೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಬಗ್ಗೆ ಎಕ್ಸ್‌ಲ್ಲಿ ಪೋಸ್ಟ್ ಮಾಡಿರುವ ಆಸಿಫ್, ಪ್ರಸ್ತುತ ಅಸ್ಥಿರ ಪರಿಸ್ಥಿತಿಯ ನಡುವೆಯೂ ಇಸ್ರೇಲ್‌ನ (Isrel) ಅಘೋಷಿತ ಪರಮಾಣು ಶಸ್ತ್ರಗಾರವು ಹೆಚ್ಚು ಆಕ್ರಮಣಕಾರಿಯಾಗಿ ವರ್ತಿಸಲು ಧೈರ್ಯ ತುಂಬಬಹುದು. ಇದು ವ್ಯಾಪಕ ಪ್ರಾದೇಶಿಕ ಸಂಘರ್ಷದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಎಚ್ಚರಿಸಿದರು.
