ಉದಯವಾಹಿನಿ, ಚಿಕ್ಕಮಗಳೂರು: ಕಲ್ಲತ್ತಗಿರಿ ಫಾಲ್ಸ್‌ಗೆ ಬಂದಿದ್ದ ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದ್ದು, ಕಾರು ಸಂಪೂರ್ಣ ಜಖಂ ಆಗಿದೆ. ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಫಾಲ್ಸ್‌ಗೆ ಪ್ರವಾಸಿಗರು ಬಂದಿದ್ದರು. ಈ ವೇಳೆ, ಕಾರು ನಿಲ್ಲಿಸಿ ಫಾಲ್ಸ್ ನೋಡಲು ತೆರಳಿದ್ದಾಗ ಗಾಳಿ ಮಳೆಗೆ ಮರ ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿ ಯಾರೂ ಇಲ್ಲದೇ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ಳಂ ಬೆಳಗ್ಗೆಯೇ ಬೃಹತ್ ಮರ ರಸ್ತೆಗೆ ಬಿದ್ದ ಪರಿಣಾಮ ಪ್ರವಾಸಿಗರು ಹಾಗೂ ಸ್ಥಳೀಯರು ಪರದಾಟ ಅನುಭವಿಸುವಂತಾಗಿದೆ. ಕೈಮರದಿಂದ 4 ಕಿ.ಮೀ. ದೂರದಲ್ಲಿ ದತ್ತಪೀಠ ಹಾಗೂ ಮುಳ್ಳಯ್ಯನಗಿರಿ ಹೋಗುವ ಸರ್ಕಲ್ ಬಳಿಯೇ ಮರ ಬಿದ್ದಿದ್ದು, ಎರಡು ಸ್ಥಳಗಳಿಗೆ ಸಂಪರ್ಕ ಸಂಪೂರ್ಣ ಕಟ್ ಆಗಿದೆ. ಕಿರಿದಾದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಕಾರಣ ಸ್ಥಳೀಯರು-ಗ್ರಾಮಾಂತರ ಪೊಲೀಸರು ಮರ ತೆರವು ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
