ಉದಯವಾಹಿನಿ, ಒಟ್ಟಾವಾ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಬಿಕ್ಕಟ್ಟಿನಲ್ಲಿ ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ ಎಂದು G-7 ಶೃಂಗಸಭೆಯಲ್ಲಿ (G-7 Summit) ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಆ ಮೂಲಕ ಇರಾನ್ (Iran) ಜೊತೆಗಿನ ಸಂಘರ್ಷದಲ್ಲಿ ಇಸ್ರೇಲ್‌ಗೆ (Israel) ಬೆಂಬಲ ವ್ಯಕ್ತಪಡಿಸಿದ್ದಾರೆ. ಜಿ-7 ನಾಯಕರಾದ ನಾವು ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಸ್ಥಿರತೆಗೆ ಬದ್ಧರಾಗಿದ್ದೇವೆ. ಈ ಸಂದರ್ಭದಲ್ಲಿ ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ ಎಂಬುದು ನಮ್ಮ ಅಭಿಪ್ರಾಯ. ಇಸ್ರೇಲ್‌ನ ಸುರಕ್ಷತೆಗಾಗಿ ನಾವು ನಮ್ಮ ಬೆಂಬಲವನ್ನು ಪುನರುಚ್ಚರಿಸುತ್ತೇವೆ. ನಾಗರಿಕರ ರಕ್ಷಣೆಯ ಮಹತ್ವವನ್ನು ದೃಢೀಕರಿಸುತ್ತೇವೆ ಎಂದು ಕೆನಡಾದ ಪ್ರಧಾನ ಮಂತ್ರಿಯ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಇರಾನ್ ದೇಶವು ಪ್ರಾದೇಶಿಕ ಅಸ್ಥಿರತೆ ಮತ್ತು ಭಯೋತ್ಪಾದನೆಯ ಪ್ರಮುಖ ಮೂಲವಾಗಿದೆ. ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ ಎಂದು ನಾವು ನಿರಂತರವಾಗಿ ಸ್ಪಷ್ಟಪಡಿಸಿದ್ದೇವೆ. ಇರಾನಿನ ಬಿಕ್ಕಟ್ಟಿನ ನಿರ್ಣಯವು ಮಧ್ಯಪ್ರಾಚ್ಯದಲ್ಲಿ ವ್ಯಾಪಕವಾದ ಹಗೆತನಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿದೆ.
