ಉದಯವಾಹಿನಿ, ಬೆಂಗಳೂರು: ನಾನು, ಸಿಎಂ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರುವವರೆಗೂ ರಾಜ್ಯದಲ್ಲಿರುವ ಎಸ್ಕಾಂಗಳನ್ನು ಖಾಸಗೀಕರಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ನಡೆದ ಕರ್ನಾಟಕ ಪ್ರಸರಣ ನಿಗಮ ನೌಕರರ ಸಂಘದ 60ನೇ ವಜ್ರ ಮಹೋತ್ಸವ ಸಂಭ್ರಮ ಹಾಗೂ ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾನು ಇಂಧನ ಸಚಿವನಾದ ಬಳಿಕ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಮುಂಬೈ, ದೆಹಲಿ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಎಸ್ಕಾಂಗಳನ್ನು ಖಾಸಗಿಯವರಿಗೆ ನೀಡಲಾಗಿದೆ. ಹೀಗಾಗಿ ಬೆಂಗಳೂರಿನಲ್ಲೂ ಖಾಸಗಿಯವರಿಗೆ ನೀಡಬೇಕು ಎಂದು ನನ್ನ ಮೇಲೆ ಒತ್ತಡ ಹೇರಲಾಗಿತ್ತು ಎಂದಿದ್ದಾರೆ.
ಆಗ ನಾನು ನಮ್ಮ ನೌಕರರು, ಇಂಜಿನಿಯರ್‌ಗಳು, ವ್ಯವಸ್ಥಾಪಕ ಮಂಡಳಿಯವರು ಬಹಳ ಶಕ್ತಿಶಾಲಿಯಾಗಿದ್ದು, ಎಸ್ಕಾಂಗಳನ್ನು ಸಮರ್ಥವಾಗಿ ಮುನ್ನಡೆಸಲಿದ್ದಾರೆ. ರಾಜ್ಯದಲ್ಲಿ ಈ ಡಿ.ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರು ಇರುವವರೆಗೂ ಎಸ್ಕಾಂಗಳನ್ನು ಖಾಸಗೀಕರಣಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
