ಉದಯವಾಹಿನಿ, ಗಾಂಧೀನಗರ: ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಭೀಕರ ಅಪಘಾತದಲ್ಲಿ ಬದುಕುಳಿದಿದ್ದ ಏಕೈಕ ಪ್ರಯಾಣಿಕ ವಿಶ್ವಾಸ್ ಕುಮಾರ್ ರಮೇಶ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಾಸ್ಟೆಲ್‌ವೊಂದಕ್ಕೆ ವಿಮಾನ ಡಿಕ್ಕಿಯಾಗಿ ಅವಘಡ ಸಂಭವಿಸಿದಾಗ, ತುರ್ತು ನಿರ್ಗಮನ ಬಾಗಿಲು ತೆರೆದು ವಿಶ್ವಾಸ್ ಜಿಗಿದು ಬದುಕುಳಿದಿದ್ದರು. ಸಣ್ಣಪುಟ್ಟ ಗಾಯಗಳಿಂದ ಅಹಮದಾಬಾದ್‌ನ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಗಾಯಾಳು ಆರೋಗ್ಯ ವಿಚಾರಿಸಿದ್ದರು.
