ಉದಯವಾಹಿನಿ, ಗಾಂಧೀನಗರ: 9 ಜನರಿದ್ದ ಇಕೋ ಕಾರು ನೀರುಪಾಲಾಗಿ ನಾಲ್ವರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿರುವ ಘಟನೆ ಗುಜರಾತ್‌ನ ಬೋಟಾಡ್ (Botad) ಜಿಲ್ಲೆಯಲ್ಲಿ ನಡೆದಿದೆ. ಭಾರೀ ಮಳೆಯಿಂದಾಗಿ ಗುಜರಾತ್‌ನಲ್ಲಿ (Gujarat) ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಈ ಅವಘಡ ಸಂಭವಿಸಿದೆ. ಈ ಕುರಿತು ಎನ್‌ಡಿಆರ್‌ಎಫ್ (NDRF) ಅಧಿಕಾರಿ ವಿನಯ್ ಕುಮಾರ್ ಭಾಟಿ ಮಾತನಾಡಿ, ಮಂಗಳವಾರ ಬೆಳಗಿನ ಜಾವ ಈ ಅವಘಡ ಸಂಭವಿಸಿದ್ದು, ನಾಲ್ವರ ಶವ ಪತ್ತೆಯಾಗಿದೆ.
ಇನ್ನೂ ಮೂವರಿಗಾಗಿ ಶೋಧಕಾರ್ಯ ಮುಂದುವರೆದಿದೆ. ನಮ್ಮ ತಂಡವನ್ನು ರಾಜ್‌ಕೋಟ್‌ನಲ್ಲಿ ಕೆಲಸಕ್ಕೆ ನಿಯೋಜಿಸಲಾಗಿತ್ತು. ಆದರೆ ಬೋಟಾಡ್‌ನಲ್ಲಿ ಕೆಲವು ಜನ ಸಿಲುಕಿಕೊಂಡಿರುವ ಮಾಹಿತಿ ಸಿಕ್ಕ ಬೆನ್ನಲ್ಲೇ ನಾವು ಇಲ್ಲಿಗೆ ಬಂದೆವು. ಆದರೆ ಈ ಗ್ರಾಮಕ್ಕೆ ತಲುಪೋದು ಸುಲಭವಾಗಿರಲಿಲ್ಲ. ಸದ್ಯ ಸ್ಥಳೀಯ ಅಧಿಕಾರಿಗಳ ಬೆಂಬಲದೊಂದಿಗೆ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!