ಉದಯವಾಹಿನಿ, ಬೆಂಗಳೂರು: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಭಾರೀ ಕೈಗಾರಿಕಾ ಸಚಿವ ಕುಮಾರಸ್ವಾಮಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.ಬಿಡದಿಯ ಕೇತಗಾನಹಳ್ಳಿ ಬಳಿಯ ಸರ್ವೆ ನಂಬರ್ 7,8,9 ರ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡ ತನಿಖೆಗೆ ಎಸ್‌ಐಟಿ ರಚನೆ ಮಾಡಿತ್ತು.ಎಸ್‌ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಕುಮಾರಸ್ವಾಮಿ ಪರ ವಕೀಲರಾದ ಉದಯ್ ಹೊಳ್ಳ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಸಂದರ್ಭದಲ್ಲಿ ಔಪಚಾರಿಕವಾಗಿ ಯಾವುದೇ ತೆರನಾದ ಅಧಿಸೂಚನೆಯನ್ನು ಪ್ರಕಟಿಸಿಲ್ಲ ಎಂದು ಮಂಡಿಸಿದರು.
ವಾದ ಪುರಸ್ಕರಿಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ. ಜೊತೆಗೆ ಎಸ್‌ಐಟಿ ರಚನೆಯ ಬಳಿಕ ಕುಮಾರಸ್ವಾಮಿಗೆ ನೀಡಿದ್ದ ಸಮನ್ಸ್ ಅನ್ನು ಕೂಡ ತಡೆ ಹಿಡಿದಿದ್ದು, ರಾಮನಗರ ಜಿಲ್ಲಾಧಿಕಾರಿ ಮತ್ತು ತಹಸಿಲ್ದಾರ್‌ಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
