ಉದಯವಾಹಿನಿ, ಮುಂಬೈ: ಮುಂಬೈ, ಪುಣೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂಬೈಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ 27 ರಿಂದ 29 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಹವಾಮಾನ ಇಲಾಖೆ ಎಂದು ತಿಳಿಸಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ನಗರದ ಕೆಲವು ಪ್ರದೇಶಗಳು ಹಾಗೂ ರಸ್ತೆಗಳು ಜಲಾವೃತಗೊಂಡಿವೆ. ಇನ್ನೂ ಪುಣೆಯಲ್ಲಿಯೂ ಇಂದು ಭಾರೀ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.
ಜೂ.21 ರವರೆಗೆ ಮಹಾರಾಷ್ಟ್ರದ ಹಲವು ಭಾಗಗಳು ಸೇರಿದಂತೆ ಕೊಂಕಣ್, ಗೋವಾ, ಸೌರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಮುಂಬೈನಲ್ಲಿ ಜೂನ್ 23 ರಿಂದ 24ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
