
ಉದಯವಾಹಿನಿ, ಹೈದರಾಬಾದ್: ತೆಲುಗಿನ ಖ್ಯಾತ ಸುದ್ದಿ ನಿರೂಪಕಿ ಸ್ವೆಚ್ಚಾ ವೋಟಾರ್ಕರ್ (40) ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೈದರಾಬಾದ್‌ನ ಚಿಕ್ಕಡಪಲ್ಲಿಯ ಆರ್‌ಟಿ ಕ್ರಾಸ್ ರಸ್ತೆಯ ಜವಾಹರ್‌ನಗರದಲ್ಲಿರುವ ಅವರ ಮನೆಯಲ್ಲಿ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.ಕಳೆದ 18 ವರ್ಷಗಳಿಂದ ತೆಲುಗು ಮಾಧ್ಯಮ ರಂಗದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದರು. ಪ್ರಸ್ತುತ ಅವರು ‘ಟಿ ನ್ಯೂಸ್’ ವಾಹಿನಿಯಲ್ಲಿ ಸುದ್ದಿ ನಿರೂಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಸ್ವೇಚ್ಚಾ ಅವರ ಸಾವು ತೆಲುಗು ಮೀಡಿಯಾಗಳಲ್ಲಿ ಸಂಚಲನ ಮೂಡಿಸಿದೆ. ಇನ್ನೂ ಮಾಹಿತಿ ತಿಳಿದ ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು ಮೃತದೇಹವನ್ನು ಹೈದರಾಬಾದ್ ಗಾಂಧಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಿದ್ದಾರೆ. ಇವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಸ್ವೆಚ್ಚಾ ಸಾವಿಗೂ ಮುನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ಗೆ ಅವರು ʻಮನಸ್ಸು ಪ್ರಶಾಂತವಾಗಿದ್ದರೆ ಆತ್ಮ ಮಾತನಾಡುತ್ತದೆ -ಬುದ್ಧʼ ಎಂದು ಟ್ಯಾಗ್‌ಲೈನ್ ಕೂಡ ಬರೆದಿದ್ದಾರೆ. ಈ ಪೋಸ್ಟ್ ಅವರ ಸಾವಿನ ಹಿಂದಿನ ಕಾರಣದ ಬಗ್ಗೆ ಮತ್ತಷ್ಟು ಅನುಮಾನ ಮೂಡಿಸುತ್ತಿದೆ.
