ಉದಯವಾಹಿನಿ, ಕಲಬುರಗಿ: ಬಿಸಿಲನಾಡು ಕಲಬುರಗಿಯ ಖಡಕ್ ‘ಜೋಳದ ರೊಟ್ಟಿ’ಗೆ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಪ್ರಶಂಸೆ ಸಿಕ್ಕಿದೆ. ಮಾತ್ರವಲ್ಲದೇ ಮಹಿಳೆಯರ ಪರಿಶ್ರಮಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾನುವಾರ ತಮ್ಮ ಮನ್ ಕಿ ಬಾತ್‌ನ 123ನೇ ಸರಣಿಯಲ್ಲಿ ಈ ಕುರಿತು ಉಲ್ಲೇಖಿಸಿದ ಮೋದಿ, ಮಹಿಳಾ ಸ್ವಾವಲಂಬನೆ ಭಾರತದ ಅಭಿವೃದ್ಧಿಯ ಹೊಸ ಮಂತ್ರವಾಗಿದೆ. ಮಹಿಳೆ ತಾಯಿ, ಸಹೋದರಿ, ಮಗಳಾಗಿ ಇಡೀ ಸಮಾಜಕ್ಕೆ ಹೊಸ ದಿಕ್ಕು ತೋರಿಸುತ್ತಿದ್ದಾಳೆ. ಕಲಬುರಗಿ ಮಹಿಳೆಯರು ಆತ್ಮನಿರ್ಭರ ಅಭಿಯಾನದಡಿ ಜೋಳದ ರೊಟ್ಟಿಯನ್ನು ಒಂದು ಬ್ರ್ಯಾಂಡ್ ಆಗಿ ರೂಪಿಸಿದ್ದಾರೆ ಎಂದರು.

ಮುಂದುವರಿದು ಮಾತನಾಡಿ, ಕಲಬುರಗಿ ಮಹಿಳೆಯರು ಸ್ವಸಹಾಯ ಸಂಘದ ಮೂಲಕ ಪ್ರತಿನಿತ್ಯ 3 ಸಾವಿರ ರೊಟ್ಟಿ ತಯಾರಿಸುತ್ತಾರೆ. ಈ ರೊಟ್ಟಿ ಕೇವಲ ಗ್ರಾಮಗಳಿಗೆ ಮಾತ್ರ ಸೀಮಿತವಾಗಿಲ್ಲ. ಬೆಂಗಳೂರಿನಲ್ಲಿ ವಿಶೇಷ ಮಳಿಗೆ ತೆರೆದಿದ್ದು, ಆನ್‌ಲೈನ್ ಮೂಲಕ ಆರ್ಡರ್ ಬರುತ್ತವೆ. ಇದು ಮಹಿಳೆಯರ ಸಾಧನೆಯಾಗಿದೆ. ಇದು ಆತ್ಮನಿರ್ಭರದ ಪ್ರತೀಕ ಎಂದು ಶ್ಲಾಘಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!