ಉದಯವಾಹಿನಿ, ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿ ಮೂವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇದೀಗ ಘಟನೆಗೆ ಕ್ಷಮೆಯಾಚಿಸಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ, ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಘೋಷಣೆ ಮಾಡಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ನಾನು ಮತ್ತು ನನ್ನ ಸರ್ಕಾರ ಎಲ್ಲಾ ಜಗನ್ನಾಥ ಭಕ್ತರರಲ್ಲಿ ಕ್ಷಮೆಯಾಚಿಸುತ್ತದೆ. ಜೀವ ಕಳೆದುಕೊಂಡ ಭಕ್ತರ ಕುಟುಂಬಗಳಿಗೆ ನಾವು ನಮ್ಮ ಸಂತಾಪ ಸೂಚಿಸುತ್ತೇವೆ. ಈ ಆಳವಾದ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ಅವರಿಗೆ ನೀಡಬೇಕೆಂದು ಮಹಾಪ್ರಭು ಜಗನ್ನಾಥನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ತಲಾ 25 ಲಕ್ಷ ಪರಿಹಾರ ಘೋಷಣೆ: ದುರಂತದಲ್ಲಿ ಪ್ರಾಣ ಕಳೆದುಕೊಂಡ ಭಕ್ತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಅಲ್ಲದೇ ಈ ಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರದವು ನಿಮ್ಮೊಂದಿಗಿರಲಿದೆ ಎಂದು ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!