ಉದಯವಾಹಿನಿ, ಮೈಸೂರು: ಹಾಸನದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾದ ಹಿನ್ನೆಲೆ, ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಜನ ಲಗ್ಗೆ ಇಡುತ್ತಿದ್ದಾರೆ. ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳಿಂದ ಅಧಿಕ ಸಂಖ್ಯೆಯ ಜನ ಬಂದು ಹೃದಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಮುಂಜಾನೆಯೆಯಿಂದಲೇ ಆಸ್ಪತ್ರೆಯ ಓಪಿಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ. ನಿತ್ಯ 150 200 ಬರುತ್ತಿದ್ದ ರೋಗಿಗಳು ಸಂಖ್ಯೆ ಈಗ ದಿಢೀರನೆ 500 ರಿಂದ 1000ಕ್ಕೆ ಏರಿಕೆಯಾಗಿದೆ. ಹಾಸನದ ಜನ ಹೆಚ್ಚಿನ ಸಂಖ್ಯೆಯಲ್ಲಿ ಹೃದಯದ ತಪಾಸಣೆಗೆ ಬರುತ್ತಿದ್ದಾರೆ. ಇದರಲ್ಲಿ 90%ರಷ್ಟು ಜನಕ್ಕೆ ಯಾವುದೇ ಸಮಸ್ಯೆ ಇಲ್ಲ. ಕೇವಲ ಆತಂಕದಿಂದ ಬಂದಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
