ಉದಯವಾಹಿನಿ, ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದು ಮಾಡಿರುವ ಸಿಎಟಿಗೆ (ಕೇಂದ್ರೀಯ ಆಡಳಿತ ನ್ಯಾಯಮಂಡಳಿ) ಮೇಲ್ಮನವಿ ಸಲ್ಲಿಸುವ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ವಾರ್ತಾ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದು ಮಾಡಿರುವ ಕೇಂದ್ರೀಯ ಆಡಳಿತ ನ್ಯಾಯಮಂಡಳಿಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಾಸಕ ಬಿ.ಆರ್.ಪಾಟೀಲ್ (BR Patil) ಅವರ ಸಿದ್ದರಾಮಯ್ಯನವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅವರ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದರಿಂದ ಹಾಗೂ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್‌ರವರು ಈ ರೀತಿ ಹೇಳಿಕೆ ನೀಡಿರಬಹುದು ಎಂದರು.
