ಉದಯವಾಹಿನಿ, ಟೆಲ್ ಅವೀವ್: ಗಾಜಾದಲ್ಲಿ ಇಸ್ರೇಲಿ ವಾಯುದಾಳಿ ಮತ್ತು ಗುಂಡಿನ ದಾಳಿಗೆ ಆಹಾರಕ್ಕಾಗಿ ಕಾಯುತ್ತಿದ್ದ 94 ಮಂದಿ ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಅಲ್ಲದೇ, ದಕ್ಷಿಣ ಗಾಜಾದಲ್ಲಿ ಸ್ಥಳಾಂತರಗೊಂಡ ಜನರು ಮಲಗಿದ್ದಾಗ ರಾತ್ರಿಯ ಸಮಯದಲ್ಲಿ ಟೆಂಟ್ ಶಿಬಿರದ ಮೇಲೆ ನಡೆದ ದಾಳಿಗೆ ಮೃತರಾದವರ ಕುಟುಂಬಗಳು ಕಣ್ಣೀರಿಟ್ಟರು. 12 ವರ್ಷದೊಳಗಿನ ಕನಿಷ್ಠ ಆರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 13 ಸದಸ್ಯರು ಸಾವನ್ನಪ್ಪಿದ್ದಾರೆ. ನಗರದ ಸ್ಥಳಾಂತರಗೊಂಡ ಜನರಿಗೆ ಆಶ್ರಯ ನೀಡಿದ್ದ ಶಾಲೆಯ ಮೇಲೆ ನಡೆದ ಪ್ರತ್ಯೇಕ ದಾಳಿಯಲ್ಲಿ 15 ಜನರು ಸಾವನ್ನಪ್ಪಿದರು. ನೆರವು ಪಡೆಯುವ ವೇಳೆ ದಿನನಿತ್ಯದ ಗುಂಡಿನ ದಾಳಿಯಲ್ಲಿ ಹೆಚ್ಚಿನ ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪುತ್ತಿದ್ದಾರೆಂದು ತಿಳಿಸಲಾಗಿದೆ.
ಗಾಜಾ ಪಟ್ಟಿಯ ಜನರಿಗೆ ಆಹಾರ ಒದಗಿಸಲು ಇಸ್ರೇಲ್ ಬೆಂಬಲದೊಂದಿಗೆ ಹೊಸದಾಗಿ ರಚಿಸಲಾದ ಅಮೆರಿಕನ್ ಸಂಘಟನೆಯಾದ ಗಾಜಾ ಹ್ಯುಮಾನಿಟೇರಿಯನ್ ಫೌಂಡೇಶನ್ ಕೆಲಸ ಮಾಡುತ್ತಿದೆ. ಫೌಂಡೇಶನ್‌ನಿಂದ ಆಹಾರ ವಿತರಣಾ ತಾಣಗಳಿಗೆ ಹೋಗುವ ರಸ್ತೆಗಳಲ್ಲಿ ಐದು ಜನರು ಸಾವನ್ನಪ್ಪಿದ್ದರು.
