ಉದಯವಾಹಿನಿ, ಮಂಗಳೂರು: ಲವ್-ಸೆಕ್ಸ್ ದೋಖಾ ಪ್ರಕರಣದಲ್ಲಿ ಬಿಜೆಪಿ ಮುಖಂಡನ ಪುತ್ರನನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಬಿಜೆಪಿ ಘಟಕದ ಪ್ರಭಾವಿ ಮುಖಂಡನ ಮಗ ಕೃಷ್ಣ ಜೆ.ರಾವ್ (21) ಬಂಧಿತ ಆರೋಪಿ. ಮೈಸೂರಿನ ಟಿ. ನರಸೀಪುರದಲ್ಲಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಏನಿದು ಪ್ರಕರಣ..?: ಆರೋಪಿ ಕೃಷ್ಣ ಜೆ.ರಾವ್ ಪುತ್ತೂರಿನ ಹೈಸ್ಕೂಲ್‌ವೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಹುಡುಗಿಯೊಬ್ಬಳನ್ನ ಪ್ರೀತಿಸುತ್ತಿದ್ದ. ಅದೇ ಪ್ರೀತಿ ಹಾಗೆಯೇ ಮುಂದುವರಿದಿತ್ತು. ಬಳಿಕ 2024ರ ಅ.11ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿಯನ್ನ ಕರೆದುಕೊಂಡು ಹೋಗಿದ್ದ. ಈ ವೇಳೆ ಮದುವೆಯಾಗುತ್ತೇನೆ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಅದಾದ ಬಳಿಕ 2025ರ ಜನವರಿಂದಲೂ ಬಲವಂತವಾಗಿ ಯುವತಿ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದ. ಕೆಲವು ಸಮಯದ ನಂತರ ಯುವತಿ ಗರ್ಭಿಣಿಯಾದ ವಿಚಾರ ಬೆಳಕಿಗೆ ಬಂದಿತ್ತು.
