ಉದಯವಾಹಿನಿ, ನವದೆಹಲಿ: ಮುಂದಿನ 30-40 ವರ್ಷಗಳ ಕಾಲ ಜನರಿಗೆ ಸೇವೆ ಸಲ್ಲಿಸಲು ಬದುಕುವ ಆಶಯ ಹೊಂದಿದ್ದೇನೆ ಎಂದು ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಹೇಳಿದ್ದಾರೆ. ಅವರ 90ನೇ ಜನ್ಮದಿನವಾದ ಇಂದು ಉತ್ತರಾಧಿಕಾರಿಯ ಘೋಷಣೆಯ ಕುರಿತಾದ ವದಂತಿಗಳ ನಡುವೆ ಈ ಹೇಳಿಕೆ ನೀಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ಅಂತ್ಯ ಹಾಡಿದ್ದಾರೆ. ಮೆಕ್ಲಿಯೋಡ್ಗಂಜ್‌ನ ತ್ಸುಗ್ಲಾಗ್‌ಖಾಂಗ್‌ನ ಮುಖ್ಯ ದಲೈ ಲಾಮಾ ದೇವಸ್ಥಾನದಲ್ಲಿ ತಮ್ಮ 90ನೇ ಹುಟ್ಟುಹಬ್ಬಕ್ಕೂ ಮುನ್ನ ನಡೆದ ದೀರ್ಘಾಯುಷ್ಯದ ಪ್ರಾರ್ಥನಾ ಸಮಾರಂಭದಲ್ಲಿ ದಲೈ ಲಾಮಾ ಟೆನ್ಜಿನ್ ಗ್ಯಾಟ್ಸೊ ಅವರು ಮಾತನಾಡಿದರು. ಅವಲೋಕಿತೇಶ್ವರನ ಆಶೀರ್ವಾದ ತಮ್ಮೊಂದಿಗಿದೆ ಎಂಬ ಸ್ಪಷ್ಟ ಚಿಹ್ನೆಗಳು ಸಿಗುತ್ತಿವೆ ಎಂದು ಹೇಳಿದ್ದಾರೆ.

ನಾನು ಇಲ್ಲಿಯವರೆಗೆ ನನ್ನ ಕೈಲಾದಷ್ಟು ಜನರ ಸೇವೆ ಮಾಡಲು ಪ್ರಯತ್ನಿಸಿದ್ದೇನೆ. ನಾನು ಇನ್ನೂ 30-40 ವರ್ಷಗಳ ಕಾಲ ಬದುಕುತ್ತೇನೆ ಎಂದು ಭಾವಿಸುತ್ತೇನೆ. ಇಲ್ಲಿಯವರೆಗೆ ನಿಮ್ಮ ಪ್ರಾರ್ಥನೆಗಳು ಫಲ ನೀಡಿವೆ. ನಾವು ನಮ್ಮ ದೇಶವನ್ನು ಕಳೆದುಕೊಂಡು ಭಾರತದಲ್ಲಿ ದೇಶಭ್ರಷ್ಟರಾಗಿ ವಾಸಿಸುತ್ತಿದ್ದರೂ, ಇಲ್ಲಿ ನಾನು ಬಹಳಷ್ಟು ಜನರಿಗೆ ಸೇವೆ ಮಾಡಲು ಸಾಧ್ಯವಾಗಿದೆ. ನಾನು ಇನ್ನಷ್ಟು ಜನರ ಸೇವೆ ಮಾಡಲು ಬಯಸುತ್ತಿದ್ದೇನೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!