ಉದಯವಾಹಿನಿ, ಮೈಸೂರು: ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತಾ ಚರ್ಚೆಯ ಬಗ್ಗೆ ಮೈಸೂರಿನಲ್ಲಿ ನಡೆಸ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷನಾಗಿ ಮುಂದುವರಿಯುವ ವಿಶ್ವಾಸವಿದೆ. ನನ್ನ ಹೋರಾಟದ ಬಗ್ಗೆ ನಮ್ಮ ಕಾರ್ಯಕರ್ತರು ಮತ್ತು ಹೈಕಮಾಂಡ್‌ಗೆ ತೃಪ್ತಿಯಿದೆ. ಅಂತಿಮವಾಗಿ ನಮ್ಮ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದಿದ್ದಾರೆ.ನನ್ನ ನಗು ಮುಖ ನೋಡಿದರೆ ನಿಮಗೆ ನಾನು ಬದಲಾಗುತ್ತೇನೆ ಎಂದು ಅನ್ನಿಸುತ್ತದಾ? ನಾನು ಬದಲಾಗಬೇಕಾ? ಮುಂದುವರಿಯಬೇಕಾ? ಮಾಧ್ಯಮದವರೇ ಹೇಳಿ ಎಂದು ನಗುತ್ತಲೇ ಪ್ರಶ್ನಿಸಿದ್ದಾರೆ.
