ಉದಯವಾಹಿನಿ, ನವದೆಹಲಿ: ಕಾಂಗ್ರೆಸ್‌ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ನೇಮಕ ಮಾಡಿಲ್ಲ ಎಂದು ಸಿಎಂ ಕಚೇರಿ ತಿಳಿಸಿದೆ.ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಅಂತಹ ಯಾವುದೇ ನೇಮಕಾತಿ ನಡೆದಿಲ್ಲ ಎಂದು ಹೇಳಿದೆ. ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ.‌ ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿಗಳು ವಹಿಸಿಕೊಂಡಿದ್ದು ಸಭೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ.

ವಿವಿಧ ರಾಜ್ಯಗಳ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.ಎಐಸಿಸಿಯ ಒಬಿಸಿ ಘಟಕದ ಸಲಹ ಸಮಿತಿಗೆ ಬೇರೆ ಬೇರೆ ರಾಜ್ಯದ ಪ್ರಮುಖ 24 ಒಬಿಸಿ ನಾಯಕರನ್ನ ಸಲಹೆಗಾರರಾಗಿ ನೇಮಿಸಲಾಗಿದೆ. ಕೆಲವು ಮಾಜಿ ಸಿಎಂಗಳು ಇದರಲ್ಲಿ ಇದ್ದಾರೆ ಎಂದು ಸಿದ್ದರಾಮಯ್ಯನವರ ಕಚೇರಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!