ಉದಯವಾಹಿನಿ, ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿ ಸುಮಾರು 30ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿ 80ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ದುರಂತದ ನಡುವೆ ಮಂಡಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಶ್ವಾನವೊಂದು ಬೊಗಳಿದ್ದರಿಂದ 20 ಕುಟುಂಬಗಳ 67 ಜನರು ಕೊನೆ ಕ್ಷಣದಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ.
ಜೂನ್ 30 ರಂದು ಮಧ್ಯರಾತ್ರಿ ಮಂಡಿಯ ಧರಂಪುರ ಪ್ರದೇಶದ ಸಿಯಾಥಿ ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿತ್ತು. ಈ ಗ್ರಾಮದ ನರೇಂದ್ರ ಅವರ ನಿವಾಸದ ಎರಡನೇ ಮಹಡಿಯಲ್ಲಿ ಮಲಗಿದ್ದ ಸಾಕು ನಾಯಿ ಇದ್ದಕ್ಕಿದ್ದಂತೆ ಬೊಗಳಲು ಆರಂಭಿಸಿದೆ.ರಾತ್ರಿ ಇಷ್ಟೊಂದು ಬೊಗಳದ ನಾಯಿ ಯಾಕೆ ಈ ಪರಿ ಬೊಗಳುವುದನ್ನು ನೋಡಿ ಅಚ್ಚರಿಗೊಂಡು ನರೇಂದ್ರ ಎಚ್ಚರಗೊಂಡಿದ್ದಾರೆ. ನಂತರ ನಾಯಿ ಬೊಗಳಿದ ಜಾಗದ ಬಳಿ ಹೋದಾಗ ಮನೆಯ ಗೋಡೆಯಲ್ಲಿ ದೊಡ್ಡ ಬಿರುಕು ಮೂಡಿದ್ದನ್ನು ನೋಡಿದ್ದಾರೆ. ನೋಡುತ್ತಿರುವಾಗಲೇ ಆ ಬಿರುಕಿನ ಮೂಲಕ ನೀರು ಮನೆ ಒಳಗಡೆ ಹರಿಯಲು ಆರಂಭಿಸಿತ್ತು.
ನೀರು ಮನೆಗೆ ನುಗ್ಗಿದೆ ಎಂಬದು ಖಾತ್ರಿ ಆಗುತ್ತಿದ್ದಂತೆ ನಾಯಿಯ ಜೊತೆ ಕೆಳಗಡೆ ಮಲಗಿದ್ದ ಕುಟುಂಬದ ಸದಸ್ಯರನ್ನು ಎಬ್ಬಿಸಿ ಕೂಡಲೇ ಹೊರ ಬರುವಂತೆ ಹೇಳಿದ್ದಾರೆ. ಈ ಸಂದರ್ಭದಲ್ಲಿ ಜೋರು ಮಳೆ (Rain) ಸುರಿಯುತ್ತಲೇ ಇತ್ತು. ಕೂಡಲೇ ಗ್ರಾಮಸ್ಥರು ಮನೆಯನ್ನು ತೊರೆದು ಓಡಿದ್ದಾರೆ. ಮನೆ ತೊರೆದ ಕೆಲ ಸಮಯದಲ್ಲಿ ಈ ನಿವಾಸಿಗಳು ಮಲಗಿದ್ದ ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿದೆ.

Leave a Reply

Your email address will not be published. Required fields are marked *

error: Content is protected !!