ಉದಯವಾಹಿನಿ, ನವದೆಹಲಿ: ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೆಚ್.ಡಿ.ಕುಮಾರಸ್ವಾಮಿಯನ್ನು ಛೇಡಿಸಿದ್ದಾರೆ.ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ ಅವರನ್ನು ಹೆಚ್‌ಡಿಕೆ ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ಅವರ ಸಲಹೆ ಮತ್ತು ನಿಮ್ಮ ಸಲಹೆಯನ್ನು ನಾನು ಸ್ವೀಕಾರ ಮಾಡುತ್ತೇನೆ. ಕ್ರೆಡಿಟ್ ಯಾರು ಬೇಕಾದರೂ ಪಡೆದುಕೊಳ್ಳಲಿ ಎಂದಿದ್ದಾರೆ. ಸಂಪುಟ ಬದಲಾವಣೆಗಾಗಿ ಸಿಎಂ ದೆಹಲಿ ಭೇಟಿ ನೀಡಿದ್ದಾರೆಯೇ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಸಂಚಿವ ಸಂಪುಟ ಬದಲಾವಣೆ ಕುರಿತು ಯಾವುದೇ ಚರ್ಚೆಯಿಲ್ಲ. ನಾವು ಬಂದಿರುವುದು ಅಭಿವೃದ್ಧಿ ವಿಚಾರಗಳನ್ನು ಚರ್ಚೆ ನಡೆಸಲು, ಬೆಂಗಳೂರಿನಲ್ಲಿ ಒಂದಷ್ಟು ರಸ್ತೆಗಳನ್ನು ಅಗಲೀಕರಣ ಮಾಡಬೇಕಿದೆ. ಇದಕ್ಕೆ ರಕ್ಷಣಾ ಇಲಾಖೆ ಭೂಮಿಗಳ ಅವಶ್ಯಕತೆಯಿದೆ. ಈ ಕಾರಣಕ್ಕೆ ಹಾಗೂ ದಸರಾ ವೇಳೆ ಚುಟುಕು ಏರ್ ಶೋ ನಡೆಸಲು ರಕ್ಷಣಾ ಸಚಿವರನ್ನು ಭೇಟಿ ಮಾಡುವುದಕ್ಕಾಗಿ ಬಂದಿದ್ದೇವೆ ಎಂದು ಹೇಳಿದ್ದಾರೆ. ನಾಲ್ಕು ಎಂಎಲ್‌ಸಿ ಸ್ಥಾನಗಳ ನಾಮನಿರ್ದೇಶನ ಯಾವಾಗ ಎಂಬ ಪ್ರಶ್ನೆಗೆ ಅವರು, ವಿಧಾನಸಭಾ ಅಧಿವೇಶನದ ಮುಂಚಿತವಾಗಿ ಮುಗಿಯುತ್ತದೆ. ಮಾಧ್ಯಮದವರಿಗೂ ಒಂದು ಸ್ಥಾನ ನೀಡಲಾಗುವುದು ಎಂದು ಉತ್ತರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!