ಉದಯವಾಹಿನಿ, ಚೆನ್ನೈ: ಇತ್ತೀಚೆಗೆ ತಮಿಳುನಾಡಿನ ಕಡಲೂರಿನಲ್ಲಿ ಶಾಲಾ ವಾಹನ ಹಾಗೂ ರೈಲಿನ ನಡುವೆ ಸಂಭವಿಸಿದ್ದ ಅಪಘಾತದಿಂದ ಎಚ್ಚೆತ್ತ ರೈಲ್ವೇ ಇಲಾಖೆ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಲು ಮುಂದಾಗಿದೆ. ಕ್ರಾಸಿಂಗ್‌ಗಳಲ್ಲಿನ ಸಿಸಿಟಿವಿಗಳು ಹಾಗೂ ಸ್ಪೀಡ್ ಬ್ರೇಕರ್‌ಗಳ ಮಾಹಿತಿ ಕಲೆಹಾಕಲು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಮುಂದಾಗಿದೆ. ನೈಜ-ಸಮಯದ ಮೇಲ್ವಿಚಾರಣೆ ಮತ್ತು ಮಾಹಿತಿ ಸಂಗ್ರಹಕ್ಕಾಗಿ ಎಲ್ಲಾ ಲೆವೆಲ್ ಕ್ರಾಸಿಂಗ್ ಗೇಟ್‌ಗಳಲ್ಲಿ ಸೌರಶಕ್ತಿ ಚಾಲಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಹೈ-ಸ್ಪೀಡ್ ರೈಲು ಮಾರ್ಗಗಳಲ್ಲಿ, ಸ್ವಯಂಚಾಲಿತ ಗೇಟ್‌ಗಳ ಇಂಟರ್‌ಲಾಕಿಂಗ್ ಮಿತಿಯನ್ನು 20,000 ರಿಂದ 10,000 ರೈಲು ಘಟಕಗಳಿಗೆ ಇಳಿಸಲಾಗುತ್ತದೆ. ಗೇಟ್‌ಗಳಲ್ಲಿ ಸ್ಪೀಡ್ ಬ್ರೇಕರ್‌ಗಳು ಮತ್ತು ಎಚ್ಚರಿಕೆ ಫಲಕಗಳನ್ನು ಮರುವಿನ್ಯಾಸಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
