ಉದಯವಾಹಿನಿ, ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿರುವ ಪ್ರಕರಣ ಸಂಬಂಧ ಸರ್ಕಾರಕ್ಕೆ ಸಲ್ಲಿಸಿದ ನ್ಯಾ. ಮೈಕಲ್ ಕುನ್ಹಾ ಅವರ ವರದಿಯಲ್ಲಿ ಮತ್ತಷ್ಟು ಸ್ಫೋಟಕ ಅಂಶ ಬಹಿರಂಗವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ತವ್ಯ ಲೋಪ ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಶಿಫಾರಸು ಮಾಡಿದೆ. ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಮತ್ತು ಪೊಲೀಸರ ವಿರುದ್ಧ ದಂಡನೀಯ ಪ್ರಕರಣ ದಾಖಲು ಮಾಡಬಹುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಘಟನೆಗೆ ಕೆಎಸ್‌ಸಿಎ, ಡಿಎನ್‌ಎ, ಆರ್‌ಸಿಬಿ ಹಾಗೂ ಪೊಲೀಸರು ನೇರ ಹೊಣೆಯಾಗಿದ್ದಾರೆ. ಕಾರ್ಯಕ್ರಮ ನಡೆಸುವುದು ಅಸಾಧ್ಯವೆಂದು ಗೊತ್ತಿದ್ದರೂ ಎಲ್ಲರೂ ಶಾಮೀಲಾಗಿ ಕಾರ್ಯಕ್ರಮ ನಡೆಸಿದರು. ಈ ಎಲ್ಲರ ಕರ್ತವ್ಯ ಲೋಪ, ನಿರ್ಲಕ್ಷ್ಯತನದ ಪರಮಾವಧಿ ಎದ್ದು ಕಾಣುತ್ತಿದೆ. ಬಂದೋಬಸ್ತ್ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ ಎಂಬ ವಿಚಾರ ತನಿಖೆಯಲ್ಲಿ ಬಯಲಾಗಿದೆ.
